pooja vidhaana

ಮೊದಲು ಸಂಕಲ್ಪ ಮಾಡಿ, ನಂತರ ಧ್ಯಾನ ಮಾಡಿ ದೇವರನ್ನು ಆಹ್ವಾನ ಮಾಡುವುದು.
ಸಂಕಲ್ಪ – ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ, ನಕ್ಷತ್ರವನ್ನು ಹೆಸರಿಸಬೇಕು.
[ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ ವರಾಹ ಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ …..ನಾಮ ಸಂವತ್ಸರೇ, ಉತ್ತರಾಯನೇ/ದಕ್ಷಿಣಾಯನೇ ,… ಋತೌ , …. ಮಾಸೇ ,ಶುಕ್ಲ/ಕೃಷ್ಣ ಪಕ್ಷೇ , … ತಿಥಿಯಾಂ , … ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ , ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ ವಿಜಯ ವೀರ್ಯ ಅಭಯ ಆಯುರಾರೋಗ್ಯ ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ ದುರಿತೋಪಶಾಂತ್ಯರ್ಥಂ ಸಮಸ್ತ ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ….(ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ]
ಧ್ಯಾನ – ನೀವು ಪೂಜೆ ಮಾಡುತ್ತಿರುವ ದೇವರನ್ನು ಭಕ್ತಿಯಿಂದ ಧ್ಯಾನ ಮಾಡಿ ಆವಾಹನೆ ಮಾಡುವುದು.
ಸಾಮಾನ್ಯವಾಗಿ ಷೋಡಶೋಪಚಾರದಿಂದ ಪೂಜೆ ಮಾಡಿ ಅಂತ ನೀವು ಕೇಳಿರಬಹುದು. ಷೋಡಶ ಅಂದರೆ [16] ಹದಿನಾರು ಬಗೆಯಿಂದ ದೇವರಿಗೆ ಉಪಚಾರ ಮಾಡಿ ಎಂದರ್ಥ. ಇವುಗಳ ವಿವರ ಕೆಳಗಿದೆ:

1. ಆವಾಹನೆ – ಅಂದರೆ ಆಹ್ವಾನ . ದೇವರನ್ನು ನಿಮ್ಮ ಮನೆಗೆ ಅಥವಾ ಪೂಜೆ ಮಾಡುತ್ತಿರುವ ಜಾಗಕ್ಕೆ ಆಹ್ವಾನ ಮಾಡುವುದು.

2. ಆಸನ – ಅಂದರೆ ಕುಳಿತುಕೊಳ್ಳುವ ಜಾಗ . ದೇವರ ಪ್ರತಿಮೆಯನ್ನು ಇಡುವ ವೇದಿಕೆ/ ಮಣೆ ಮೇಲೆ ಆಸೀನ ಮಾಡಿಸುವುದು.

3. ಪಾದ್ಯ – ಕಾಲು ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.

4. ಅರ್ಘ್ಯ – ಕೈ ತೊಳೆದುಕೊಳ್ಳುವುದಕ್ಕೆ ನೀರು ಕೊಡುವುದು.

5. ಆಚಮನ – ಕುಡಿಯುವುದಕ್ಕೆ ನೀರು ಕೊಡುವುದು.

6. ಸ್ನಾನ – ಶುದ್ಧೋದಕ (ನೀರು) ಮತ್ತು ಪಂಚಾಮೃತದಿಂದ ಸ್ನಾನ ಮಾಡಿಸುವುದು.

7. ವಸ್ತ್ರ – ಧರಿಸಲು ಉಡುಪು ಕೊಡುವುದು . ಗೆಜ್ಜೆವಸ್ತ್ರಗಳನ್ನೂ ದೇವರಿಗೆ ಇಡುವುದು . ಜೊತೆಗೆ ಉಪವೀತ (ಜನಿವಾರ), ಆಭರಣವನ್ನು (ಬಳೆ-ಬಿಚ್ಚೋಲೆ )ಸಮರ್ಪಿಸುವುದು.

8. ಹರಿದ್ರ, ಕುಂಕುಮ, ಗಂಧ, ಅಕ್ಷತ – ಅರಿಶಿನ , ಕುಂಕುಮ, ಶ್ರೀಗಂಧ , ಮಂತ್ರಾಕ್ಷತೆಯನ್ನು ದೇವರಿಗೆ ಅರ್ಪಿಸುವುದು.

9. ಪುಷ್ಪ ಮಾಲ – ಹೂವು, ಪತ್ರೆಗಳಿಂದ ದೇವರಿಗೆ ಅಲಂಕಾರ ಮಾಡುವುದು.

10. ಅರ್ಚನೆ/ಅಷ್ಟೋತ್ತರ – ನೂರೆಂಟು ನಾಮಗಳಿಂದ ದೇವರನ್ನು ಸ್ಮರಣೆ ಮಾಡುವುದು.

11. ಧೂಪ – ಪರಿಮಳಯುಕ್ತವಾದ ಧೂಪವನ್ನು ಅರ್ಪಿಸುವುದು.

12. ದೀಪ – ದೀಪ ಸಮರ್ಪಣೆ ಮಾಡುವುದು.

13. ನೈವೇದ್ಯ, ತಾಂಬೂಲ – ದೇವರಿಗೆ ವಿಧ ವಿಧ ಭಕ್ಷ್ಯಗಳ ಭೋಜನ ಅರ್ಪಿಸುವುದು . ಊಟದ ನಂತರ ವೀಳೆಯ, ಅಡಿಕೆ, ತೆಂಗಿನಕಾಯಿ ತಾಂಬೂಲ ಕೊಡುವುದು.

14. ನೀರಾಜನ – ಕರ್ಪುರದಿಂದ ಮಂಗಳಾರತಿ ಮಾಡುವುದು.

15. ನಮಸ್ಕಾರ – ಪ್ರದಕ್ಷಿಣೆ ಮಾಡಿ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದು.

16. ಪ್ರಾರ್ಥನೆ – ನಿಮ್ಮ ಇಷ್ಟಗಳನ್ನು ನಡೆಸಿ ಕೊಡು ಎಂದು ದೇವರಲ್ಲಿ ಅರಿಕೆ / ಪ್ರಾರ್ಥನೆ ಮಾಡುವುದು. ಪೂಜೆಯ ನಂತರದೇವರು ಅನುಗ್ರಹಿಸಿರುವ ಅರಿಶಿನ, ಕುಂಕುಮ, ನೈವೇದ್ಯವನ್ನು ಪ್ರಸಾದ ರೂಪವಾಗಿ ಸ್ವೀಕಾರ ಮಾಡುವುದು.

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s