baagilanu teredu

ರಚನೆ: ಕನಕದಾಸರು

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರುಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ |

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ ||

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ |||

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s