gist on vishnusahasranaama

ವಿಷ್ಣು ಸಹಸ್ರನಾಮ

ಮಹಾಭಾರತ ಯುದ್ಧ ಮುಗಿದಿದೆ. ಭೀಷ್ಮಾಚಾರ್ಯರು ಶರಶಯ್ಯದಲ್ಲಿದ್ದಾರೆ. ಇತ್ತ ಧರ್ಮರಾಯನ ಪಟ್ಟಾಭಿಷೇಕ ಶ್ರೀಕೃಷ್ಣ ಮತ್ತು ವ್ಯಾಸರ ಸಮ್ಮುಖದಲ್ಲಿ ನಡೆದಿದೆ. ಒತ್ತಾಯದಲ್ಲಿ ಪಟ್ಟಾಭಿಷೇಕಕ್ಕೆ ಒಪ್ಪಿದ್ದ ಯುಧಿಷ್ಠಿರನ ಮನಸ್ಸಿಗೆ ಕಿಂಚಿತ್ತೂ ಸಮಾಧಾನವಿಲ್ಲ. ಎಲ್ಲಾ ವೀರರು, ಹಿರಿಯರು, ಲಕ್ಷ-ಲಕ್ಷ ಮಂದಿ ಸೈನಿಕರ ನಾಶದ ನಂತರ, ಸಿಂಹಾಸನವೇರಿದ ಆತನಿಗೆ ಪಾಪ ಪ್ರಜ್ಞೆ ಕಾಡುತ್ತಿರುತ್ತದೆ. ಇಂತಹ ಸ್ಥಿತಿಯಲ್ಲಿದ್ದ ಧರ್ಮರಾಯನನ್ನು ಶ್ರೀಕೃಷ್ಣ ಭೀಷ್ಮಾಚಾರ್ಯರ ಬಳಿಗೆ ಕರೆತಂದು, ಆತನಿಗೆ ಧರ್ಮ ಪಾಠವನ್ನು ಬೋಧಿಸುವಂತೆ ಕೇಳಿಕೊಳ್ಳುತ್ತಾನೆ. ಧರ್ಮದ ಪರ ಹೋರಾಡಿ ಗೆದ್ದ ಧರ್ಮರಾಯನನ್ನು ಕೊಂಡಾಡಿದ ಭೀಷ್ಮಾಚಾರ್ಯರು, “ಒಂದು ವೇಳೆ ನೀನು ಅನ್ಯಾಯದ ವಿರುದ್ದದ ಈ ಯುದ್ಧದಲ್ಲಿ ಹೋರಾಡದೆ ಇದ್ದಿದ್ದರೆ, ನಿನ್ನನ್ನು ಹೇಡಿ ಎನ್ನುತ್ತಿದ್ದೆ” ಎನ್ನುತ್ತಾರೆ. ಈ ಮಾತಿನಿಂದ ಧರ್ಮರಾಯನಲ್ಲಿದ್ದ ಪಾಪ ಪ್ರಜ್ಞೆ ಹೊರಟುಹೋಗಿ , ತನಗೆ ಧರ್ಮೋಪದೇಶ ಮಾಡಬೇಕೆಂದು ಭೀಷ್ಮಾಚಾರ್ಯರಲ್ಲಿ ಕೇಳಿಕೊಳ್ಳುತ್ತಾನೆ. ಈ ರೀತಿ ಭೀಷ್ಮಾಚಾರ್ಯರು ಧರ್ಮರಾಯನಿಗೆ ಧರ್ಮೋಪದೇಶ ಮಾಡಿದ ಮಹಾಭಾರತದ ಅನುಶಾಸನ ಪರ್ವದ ಕೊನೆಯ ಅಪೂರ್ವ ಉಪದೇಶ ಈ ವಿಷ್ಣು ಸಹಸ್ರನಾಮ. ವ್ಯಾಸ ಮಹರ್ಷಿಗಳು ಈ ಸಾವಿರ ನಾಮವನ್ನು ಸ್ತೋತ್ರ ರೂಪದಲ್ಲಿ ನಮಗೆ ಕಾಣಿಕೆಯಾಗಿ ನೀಡಿದ್ದಾರೆ. ವಿಷ್ಣು ಸಹಸ್ರನಾಮದಲ್ಲಿ ಬರುವ ಸಾವಿರ ನಾಮಗಳು ಭಗವಂತನ ಗುಣವಾಚಕ ನಾಮಗಳಾಗಿವೆ.ನಮಗೆ ಇರುವ ಹೆಸರು ಗುಣವಾಚಕವಲ್ಲ. ಕರೆದಾಗ ಓಗೊಡಲು ಇಟ್ಟ ಹೆಸರು. ಆದರೆ ಭಗವಂತನ ಪ್ರತೀ ನಾಮ ಆತನ ಗುಣವನ್ನು ವರ್ಣಿಸುತ್ತದೆ. ನಮ್ಮಲ್ಲಿ ಅನೇಕ ಸಹಸ್ರನಾಮಗಳಿವೆ. ಬಹಳ ಪ್ರಸಿದ್ಧವಾದ ಲಲಿತ ಸಹಸ್ರನಾಮ, ಶಿವ ಸಹಸ್ರನಾಮ, ಗಣೇಶ ಸಹಸ್ರನಾಮ, ನರಸಿಂಹ ಸಹಸ್ರನಾಮ ಇತ್ಯಾದಿ. ಈ ಎಲ್ಲಾ ಸಹಸ್ರನಾಮಗಳಿಗಿಂತ ಹೆಚ್ಚು ವ್ಯಾಖ್ಯಾನವಿರುವ, ಹೆಚ್ಚು ಮಂದಿ ವಿದ್ವಾಂಸರು ಭಾಷ್ಯ ಬರೆದಿರುವ, ಮಹಾಭಾರತದ ಭಾಗವಾಗಿರುವ, ಸುಪ್ರಸಿದ್ಧ ಸಹಸ್ರನಾಮ-ವಿಷ್ಣು ಸಹಸ್ರನಾಮ. ಪದ್ಮ ಪುರಾಣದಲ್ಲಿ ಒಂದು ವಿಷ್ಣು ಸಹಸ್ರನಾಮವನ್ನು ಕಾಣುತ್ತೇವೆ. ಆದರೆ ಅದು ಅಷ್ಟೊಂದು ಪ್ರಚಲಿತದಲ್ಲಿಲ್ಲ. ವಿಷ್ಣು ಸಹಸ್ರನಾಮದಲ್ಲಿ ಕೆಲವೊಂದು ನಾಮಗಳು ಒಂದಕ್ಕಿಂತ ಹೆಚ್ಚು ಭಾರಿ ಪುನರಾವರ್ತನೆ ಆಗಿರುವುದನ್ನು ನಾವು ಕಾಣುತ್ತೇವೆ. ವಿಷ್ಣು ಸಹಸ್ರನಾಮದಲ್ಲಿ ಬರುವ ಒಂದೊಂದು ನಾಮಕ್ಕೆ ನೂರು ಅರ್ಥವಿದೆಯಂತೆ. ಒಂದು ವೇಳೆ ಒಂದು ನಾಮ ಎರಡು ಬಾರಿ ಬಂದರೆ ಆ ನಾಮಕ್ಕೆ ಇನ್ನೂರು ಅರ್ಥಗಳಿವೆ ಎಂದು ತಿಳಿಯಬೇಕಾಗುತ್ತದೆ. ಆದರೆ ಇಷ್ಟೊಂದು ಅರ್ಥವನ್ನು ಕಂಡುಕೊಳ್ಳುವುದು ಸಾಮಾನ್ಯರಿಗೆ ಅಸಾಧ್ಯ.

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s