naanu

ಗೀತೋಪದೇಶ

ಕೃಷ್ಣ ಹೇಳುತ್ತಾನೆ “ಯಾರಿಗೆ ‘ನಾನು’ ಮಾಡುತ್ತಿಲ್ಲ ಎಂದು ಗೊತ್ತಿದೆಯೋ ಅವನು ತಿಳಿದವನು” ಎಂದು. ಆದ್ದರಿಂದ ಮೊದಲು ನಾವು “ನಾನು ಮಾಡುತ್ತಿದ್ದೇನೆ” ಎನ್ನುವ ಅಹಂಕಾರವನ್ನು ಬಿಟ್ಟುಬಿಡಬೇಕು. ನಾನು ಮಾಡುತ್ತಿದ್ದೇನೆ ಎನ್ನುವುದು ಕೇವಲ ವ್ಯವಹಾರಿಕ ಸತ್ಯ ಹೊರತು ಪಾರಮಾರ್ಥಿಕ ಸತ್ಯವಲ್ಲ.

ಉದಾಹರಣೆಗೆ: “ನಾನು ಮಾತನಾಡುತ್ತಿದ್ದೇನೆ”. ಇಲ್ಲಿ ನಾನು ಮಾತನಾಡಬೇಕಾದರೆ ಮೊದಲು ನಾನು ಮೂಗನಾಗಿರಬಾರದು. ಅದಕ್ಕೆ ಸರಿಯಾದ ಅಂಗಾಂಗವಿರುವ ಮಾನವ ಶರೀರವಿರಬೇಕು. ಮಾತನಾಡಬೇಕಾದರೆ ನನ್ನ ಮನಸ್ಸು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ಯೋಚಿಸಿ ಸಂದೇಶವನ್ನು ರವಾನಿಸಬೇಕು. ಅಂದರೆ ಇದಕ್ಕೆ ಸರಿಯಾದ ಮೆದುಳಿನ ಶಕ್ತಿ ನನಗೆ ಬೇಕು. ಮಾತನಾಡುವ ಧೈರ್ಯ ನನಗೆ ಬೇಕು.

ಈಗ ನಮಗೆ ನಾವೇ ಪ್ರಶ್ನೆ ಹಾಕಿಕೊಳ್ಳೋಣ: ನನಗೆ ಮಾತನಾಡಬಲ್ಲ ಮಾನವ ದೇಹವನ್ನು ಕೊಟ್ಟವನ್ಯಾರು? ನನಗೆ ಯೋಚಿಸಬಲ್ಲ ಮೆದುಳನ್ನು ವಿನ್ಯಾಸಗೊಳಿಸಿ ಕರುಣಿಸಿದನ್ಯಾರು? ಸಮಯಕ್ಕೆ ಸರಿಯಾಗಿ ಈ ಮೆದುಳಿನಿಂದ ಸಂದೇಶವನ್ನು ರವಾನಿಸಿದವನ್ಯಾರು? ಮಾತನಾಡುವ ಅದ್ಭುತ ಕಲೆಯನ್ನು ನನಗೆ ದಯಾಪಾಲಿಸಿದವನ್ಯಾರು? ಈ ಎಲ್ಲಾ ಪ್ರಶ್ನೆಯಿಂದ ನಮಗೆ ತಿಳಿಯುವುದೇನೆಂದರೆ: “ನನ್ನೊಳಗಿರುವ ಭಗವಂತ ನುಡಿಸಿದ-ನಾನು ನುಡಿದೆ” ಎನ್ನುವ ಸತ್ಯ. ಇದನ್ನೇ ಇಲ್ಲಿ ಭಗವಂತ ವಿವರಿಸುತ್ತ ಹೇಳುತ್ತಾನೆ “ಪ್ರಕೃತ್ಯೈವ ಚ ಕರ್ಮಾಣಿ ಕ್ರಿಯಮಾಣಾನಿ ಸರ್ವಶಃ” ಎಂದು. ಅವರವರ ಜೀವಪ್ರಕೃತಿ(ಜೀವ ಸ್ವಭಾವ)ಗೆ ಅನುಗುಣವಾಗಿ, ಪ್ರಕೃತಿ(ತ್ರಿಗುಣಗಳ) ಪ್ರಭಾವದಿಂದ, ಪ್ರಕೃತಿಪುರುಷರು(ಲಕ್ಷ್ಮೀನಾರಾಯಣರು) ನಮ್ಮಿಂದ ಕರ್ಮವನ್ನು ಮಾಡಿಸುತ್ತಾರೆ.

ಆದ್ದರಿಂದ ಜೀವನಿಗೆ ಅನಾಧಿನಿತ್ಯವಾಗಿ ಬಂದ ಜೀವಸ್ವಭಾವಕ್ಕನುಗುಣವಾಗಿ ಆತನ ದೇಹ ಸೃಷ್ಟಿ; ಅದಕ್ಕನುಗುಣವಾಗಿ ಆತನ ಮೇಲೆ ವಾತಾವರಣದಲ್ಲಿನ ತ್ರಿಗುಣಗಳ ಪ್ರಭಾವ; ತ್ರಿಗುಣಗಳ ಪ್ರಭಾವದಂತೆ ಆತನ ಎಲ್ಲಾ ವಿಧದ ಕರ್ಮ. ಇದೆಲ್ಲವನ್ನು ಮಾಡಿಸುವವ- ಸರ್ವದೇವತೆಗಳ ಅಧಿಪತಿಯಾದ, ಲಕ್ಷ್ಮೀ ಸಮೇತನಾದ ನಾರಾಯಣ…

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s